Karnataka lokayukta jobs : 2024 ರಲ್ಲಿ ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಕ್ಲರ್ಕ್ ಕಂ ಟೈಪಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಗೆಳೆಯರಿಗೆ ಶೇರ್ ಮಾಡಿ

Karnataka lokayukta jobs: ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಗ್ರೂಪ್ – ಸಿ ವೃಂದದಲ್ಲಿ ಖಾಲಿ ಇರುವ 30 ( 16 ಉಳಿಕೆ ಮೂಲ ವೃಂದದಲ್ಲಿ ಮತ್ತು 14 ಸ್ಥಳೀಯ ವೃಂದದಲ್ಲಿ ) ಕ್ಲರ್ಕ್ ಕಂ ಟೈಪಿಸ್ಟ್ ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ವಿದ್ಯಾರ್ಹತೆ, ವಯೋಮಿತಿ, ಕೊನೆ ದಿನಾಂಕ ಮತ್ತು ನೇಮಕಾತಿಗೆ ಸಂಬಂಧಿಸಿದಂತೆ ಇನ್ನಿತರ ಅರ್ಹತೆಗಳನ್ನು ಓದಿ ತಿಳಿದುಕೊಂಡು ಅರ್ಜಿ ಸಲ್ಲಿಸಬಹುದು. ಮತ್ತು ಅಧಿಕೃತ ವೆಬ್ ಸೈಟ್ ಭೇಟಿ ನೀಡಿ ಇನ್ನು ಹೆಚ್ಚಿನ ಮಾಹಿತಿ ತಿಳಿದು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಬಗೆ

ಈ ಹುದ್ದೆಗೆ ಅರ್ಹತೆ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರ್ನಾಟಕ ಲೋಕಾಯುಕ್ತ ಸಂಸ್ಥೆಯ ವೆಬ್ಸೈಟ್ https://lokayukta.kar.nic.in/ ನಲ್ಲಿ ಆನ್ಲೈನ್ ( online ) ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿದೆ.

ವಿದ್ಯಾರ್ಹತೆ

ಪದವಿ ಪೂರ್ವ ಶಿಕ್ಷಣ ಪರೀಕ್ಷೆ ಉತ್ತೀರ್ಣ ಅಥವಾ ತತ್ಸಮಾನ ಹಾಗೂ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನುಡಿಸುವ ಕನ್ನಡ ಮತ್ತು ಆಂಗ್ಲ ಕಿರಿಯ ದರ್ಜೆ ಬೆರಳಚ್ಚು ಪರೀಕ್ಷೆ ಉತ್ತೀರ್ಣ ಅಥವಾ ತತ್ಸಮಾನ.

ವಯೋಮಿತಿ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ತುಂಬಿರಬೇಕು .

ಅರ್ಜಿ ಶುಲ್ಕ

ಸಾಮಾನ್ಯ ಮತ್ತು ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಮತ್ತು ಮಾಜಿ ಸೈನಿಕರಿಗೆ 250/-ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ, ಪ್ರವರ್ಗ 1, ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ.

ಆಯ್ಕೆ ವಿಧಾನ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ನಿಯಮಾನುಸಾರ ಆಯ್ಕೆ ಮಾಡಲಾಗುವುದು.

ದಿನಾಂಕ

ಅರ್ಜಿ ಸಲ್ಲಿಸಲು ಆರಂಭವಾದ ದಿನಾಂಕ 30/10/2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 29/11/2024

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ 30/11/2024

ಈ ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಲು ಅಧಿಸೂಚನೆಯ ಪಿಡಿಎಫ್ ನ ಓದಿ ಅಧಿಸೂಚನೆಯ ಪಿಡಿಎಫ್ ಲಿಂಕ್ 👉 https://lokayukta.kar.nic.in/cct_rec.php

ಇದನ್ನು ಸಹ ಓದಿ ತಿಳಿದುಕೊಳ್ಳಿ 👉 ಇನ್ಸ್ಟಾ ಗ್ರಾಮ್ ( instagram ) ಅಕೌಂಟ್ ಹ್ಯಾಕ್ ಆಗಿದಿಯ ಅಥವಾ ಇಲ್ವಾ ಅಂತ ಚೆಕ್ ಮಾಡೋದೇಗೆ ?

Leave a Comment

Your email address will not be published. Required fields are marked *

Scroll to Top